ಹಾಸನ:ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ವಿಸರ್ಜನಾ ವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ವೀರಪ್ಪ ಮೊಯ್ಲಿ ಅವರು ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾನ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ಆಪತ್ತಿನಲ್ಲಿದೆ ಎನ್ನುವುದು ಕೇವಲ ಊಹಾಪೋಹ. ಒಬ್ಬರಿಂದ ಅಥವಾ ಇಬ್ಬರಿಂದ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸುವವರು ನಾಶವಾಗುತ್ತಾರೆ ಎಂದಿದ್ದಾರೆ.










