ಅಮರಾವತಿ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸೇರಿದಂತೆ 15 ಮಂದಿ ವಿರುದ್ಧ ಮಹಾರಾಷ್ಟ್ರ ನ್ಯಾಯಾಲಯ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. 2010ರಲ್ಲಿ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರಂಟ್ ಜಾರಿ ಮಾಡಲಾಗಿದೆ.ನಾಂದೇಡ್ ಜಿಲ್ಲೆಯ ಧರ್ಮಾಬಾದ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ 15 ಮಂದಿ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದು, ಸೆಪ್ಟೆಂಬರ್ 21ರೊಳಗೆ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿದೆ.










