ಜಮ್ಮು :ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಕೆಸ್ವಾನ್ ಪ್ರದೇಶದಿಂದ ಕಿಶ್ತ್ವಾರ್ ಜಿಲ್ಲೆಗೆ ತೆರಳುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಥಕ್ರಾಯ್ ಬಳಿ ದಂಡಾರಣ್ನಲ್ಲಿರುವ ಸುಮಾರು 300 ಅಡಿ ಆಳದ ಕಂದಕ್ಕೆ ಉರುಳಿ ಬಿದ್ದಿದ್ದು, ಮಿನಿ ಬಸ್ನಲ್ಲಿ 30 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಇದರಲ್ಲಿ 13 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಘಟನೆಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಧನವನ್ನು, ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಧನ ನೀಡುವುದಾಗಿ ಕಿಸ್ತ್ವಾರ್ ಜಿಲ್ಲೆಯ ಉಪ ಕಮಿಷನರ್ ಅಂಗ್ರೆಜ್ ಸಿಂಗ್ ರಾಣಾ ಘೋಷಿಸಿದ್ದಾರೆ.










