ಗೋವಾ ಸಿಎಂ ಅನಾರೋಗ್ಯ ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು…

242
firstsuddi

ನವದೆಹಲಿ:ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಪ್ಯಾಂಕ್ರಿಯಾಟಿಕ್ ಕಾಯಿಲೆ ಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ  ಪ್ರಧಾನಿ ಮೋದಿಯವರ ಸಲಹೆಯಂತೆ ಪರಿಕ್ಕರ್ ಅವರನ್ನು ಹೆಚ್ಚಿನ ತಪಾಸಣೆಗಾಗಿ  ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು , ಅನಾರೋಗ್ಯಕ್ಕೆ ಒಳಗಾಗಿರುವ ಮನೋಹರ್​ ಪರಿಕ್ಕರ್ ಪ್ರಧಾನಿ  ನರೇಂದ್ರ ಮೋದಿ ಹಾಗೂ ಅಮಿತ್​ ಶಾ ಜೊತೆ ಮಾತನಾಡಿ, ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸಿಎಂ ಆಗಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.