ಸಾಗರದ ಕಾಡಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ…

271
firstsuddi

ಶಿವಮೊಗ್ಗ: ಸಾಗರ ತಾಲೂಕಿನ ತೊರೆಗದ್ದೆ ಕಾಡಿನಲ್ಲಿ ವರ್ಗೀಸ್ ಯಾನೆ ತಂಗಚ್ಚನ್(65) ಎಂಬುವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ. ಇತ್ತೀಚೆಗಷ್ಟೆ ತಂಗಚ್ಚನ್ ಅವರ ಪತ್ನಿ ಮೃತಪಟ್ಟಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಡಿವೈಎಸ್ಪಿ ಮಂಜುನಾಥ್ ಕವರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.