ರಾಜ್ಯದಲ್ಲಿ ಪೆಟ್ರೋಲ್​, ಡೀಸೆಲ್​ ದರ 2 ರೂ. ಇಳಿಸಲಾಗುವುದು- ಮುಖ್ಯಮಂತ್ರಿ ಕುಮಾರಸ್ವಾಮಿ…

273
firstsuddi

 ಕಲಬುರಗಿ:  ಪ್ರತಿದಿನ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗುತ್ತಿದ್ದು, ನಾಡಿನ ಜನತೆಗೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಕನಿಷ್ಠ 2.ರೂ ಇಳಿಸಲಾಗುವುದು. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿತ ಮಾಡಬೇಕೆಂಬ ಒತ್ತಾಯ ಕೇಳಿ ಬಂದಿದೆ ಈ ನಿಟ್ಟಿನಲ್ಲಿ  ಪೆಟ್ರೋಲ್​ ಡೀಸೆಲ್​ ಮೇಲಿನ ಸೆಸ್​ ಕಡಿಮೆ ಮಾಡಿ ರಾಜ್ಯದ ಜನತೆಯ ಹೊರೆ ಕಡಿಮೆ ಮಾಡುವ ಮೂಲಕ ಸರ್ಕಾರ ಜವಾಬ್ದಾರಿಯನ್ನು ನಿರ್ವಹಿಸಲಿದೆ.  ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.