ಚಾಲಕನ ನಿಯಂತ್ರಣ ತಪ್ಪಿ,ಕೋಳಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿ ಪಲ್ಟಿ…

336
firstsuddi

ಬೆಂಗಳೂರು :ಹೊರವಲಯದ ನೆಲಮಂಗಲ ತಾಲೂಕಿನ ಮೂಡಲಪಾಳ್ಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೋಳಿಯನ್ನು ಸಾಗಿಸುತ್ತಿದ್ದ ಕ್ಯಾಂಟರ್ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಸುಮಾರು ಸಾವಿರಾರು ಕೋಳಿಗಳು ಸಾವನ್ನಪ್ಪಿದೆ. ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ  ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಸತ್ತ ಕೋಳಿಗಳನ್ನು ಮನೆಗೆ ತೆಗೆದುಕೊಂಡು ಹೋಗಲು ಮುಂದಾಗಿದ್ದು,  ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.