ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜಕೀಯ ಬಿಕ್ಕಟ್ಟುಗಳಿಗೆ ಬಿಜೆಪಿಯೇ ನೇರ ಕಾರಣ. ಬಿಜೆಪಿಯವರು ಶಾಸಕರಿಗೆ ಹಣದ ಆಮಿಷ ಒಡ್ಡಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಹೇಳಿಕೊಳ್ಳುವಂಥ ಭಿನ್ನಾಭಿಪ್ರಾಯಗಳು ಏನು ಇಲ್ಲ. ಹಾಗಾಗಿ ನಮಗೆ ಯಾವುದೇ ಭಯವಿಲ್ಲ. ಜನತಾಂತ್ರಿಕವಾದ ನಮ್ಮ ಮೈತ್ರಿ ಸರ್ಕಾರ ಉಳಿಯಬೇಕು. ಮೈತ್ರಿ ಸರ್ಕಾರಕ್ಕೆ ಪ್ರತಿಪಕ್ಷ ಬಿಜೆಪಿ ಸಲಹೆಯನ್ನೂ ಕೊಡುತ್ತಿಲ್ಲ. ಜನರ ಒಳಿತಿಗಾಗಿ ಬಿಜೆಪಿ ಏನೂ ಮಾಡುತ್ತಿಲ್ಲ ಭಾರಿ ಮಳೆಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯನ್ನು ಪುನರ್ ನಿರ್ಮಾಣ ಮಾಡಬೇಕು. ಬಿಜೆಪಿಯವರು ಸರ್ಕಾರದ ಜೊತೆ ಕೈಜೋಡಿಸಿ ಕೆಲಸ ಮಾಡಲಿ. ಬಿಜೆಪಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಕೊಡಗು ಪುನರ್ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್ ಕೇಳಲಿ ಎಂದು ವಿಶ್ವನಾಥ್ ಆಕ್ರೋಶ ವ್ಯಕ್ತಡಿಸಿದ್ದಾರೆ.










