ನಮ್ಮಿಂದ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆ ಯಾಗುವುದಿಲ್ಲ.- ಸತೀಶ್ ಜಾರಕಿಹೊಳಿ… 

526
firstsuddi

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭೇಟಿ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು,  ನಮ್ಮ ಬೇಡಿಕೆಯನ್ನು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದೇವೆ. ನಮ್ಮ ಬೇಡಿಕೆಗಳಿಗೆ ಸ್ಪಂದನೆ ಸಿಕ್ಕಿದೆ. ಸರ್ಕಾರದ ಮಟ್ಟದಲ್ಲಿ ಕೆಲಸಗಳು ಆಗುತ್ತಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಬೆಳಗಾವಿ ರಾಜಕಾರಣದ ಬಗ್ಗೆ ಅಸಮಾಧಾನವಿತ್ತು ಈಗ ಎಲ್ಲಾ ಸಮಸ್ಯೆ ಬಗೆಹರಿದಿದೆ.ಸರ್ಕಾರವನ್ನು ಬೀಳಿಸುತ್ತೇವೆ ಎನ್ನುವುದು ಊಹಪೋಹ, ನಮ್ಮಿಂದ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.