ಇಂದು ರಾಹುಲ್ ಗಾಂಧಿ ಜೊತೆ ಕೈ ನಾಯಕರ ಸಭೆ…

218
firstsuddi

ಬೆಂಗಳೂರು: ಪಕ್ಷದಲ್ಲಿನ ಗೊಂದಲಗಳ ಕುರಿತು ಹೈ ಕಮಾಂಡ್ ಜೊತೆ ಚರ್ಚಿಸಲು ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಈಗಾಗಲೇ ದೆಹಲಿಗೆ ತೆರಳಿದ್ದು,. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಕೈ ನಾಯಕರು ಚರ್ಚೆ ನಡೆಸಲಿದ್ದು, ಜಾರಕಿಹೊಳಿ ಸಹೋದರರ ಸಮಸ್ಯೆ ಪರಿಹಾರಕ್ಕೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಕುರಿತು ಚರ್ಚೆ ನಡೆಯಲಿದೆ. ಜತೆಗೆ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.