ಗುಜರಾತ್: ಗಿರ್ ಅರಣ್ಯ ಪ್ರದೇಶದ ದಾಲ್ಕನೀಯಾ ವ್ಯಾಪ್ತಿಯಲ್ಲಿ 11 ಸಿಂಹಗಳ ಮೃತದೇಹಗಳು ಪತ್ತೆಯಾಗಿದ್ದು,ಇಲ್ಲಿ ಎರಡು ದಿನಗಳ ಹಿಂದೆ 7 ಸಿಂಹಗಳ ಶವ ಪತ್ತೆಯಾಗಿತ್ತು. ಇದೀಗ ಇದೇ ಪ್ರದೇಶದಲ್ಲಿ ಮತ್ತೆ 4 ಸಿಂಹಗಳ ಶವ ಪತ್ತೆಯಾಗಿದೆ. ಈ ಮೂಲಕ ಸಿಂಹಗಳ ಸಾವಿನ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ. ಈ ಹಿಂದೆ ಸಿಂಹಗಳ ಮರಣೋತ್ತರ ಪರೀಕ್ಷೆಯಲ್ಲಿ ಸಿಂಹಗಳ ಸಾವಿಗೆ ಕಾದಾಟದಿಂದ ಆದ ಗಾಯಗಳೇ ಕಾರಣ ಎಂದು ವೈದ್ಯರು ತಿಳಿಸಿದ್ದು, ಈಗ ದೊರೆತಿರುವ ಶವಗಳನ್ನೂ ಜುನಾಘಡ್ ನಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.










