ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಜೀಪ್,10 ಮಂದಿ ಸಾವು…

249
firstsuddi

ಹಿಮಾಚಲ್ ಪ್ರದೇಶ: ಚಾಲಕನ ನಿಯಂತ್ರಣ ತಪ್ಪಿ ಜೀಪ್ವೊಂದು ಕಂದಕಕ್ಕೆ ಉರುಳಿದ ಘಟನೆ ಶಿಮ್ಲಾ ಜಿಲ್ಲೆಯ ಸನೈಲ್ ಬಳಿ ನಡೆದಿದ್ದು, ಜೀಪ್ ನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಜೀಪ್ ನಜ್ಜುಗುಜ್ಜಾಗಿದೆ. ಗಾಯಗೊಂಡಿರುವ ಮೂವರನ್ನು ರೊಹ್ರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ನಡೆದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.