ಮಂಡ್ಯ:ಪಾದಚಾರಿಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್…

232
firstsuddi

ಮಂಡ್ಯ: ಪಾದಚಾರಿಗೆ ಡಿಕ್ಕಿ ಹೊಡೆದು ನಂತರ ಬಸ್ ಮನೆಗೆ ನುಗ್ಗಿದ ಘಟನೆ ಮಳವಳ್ಳಿ ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ, ಬಸ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಾದೇಶ್ (48) ಸ್ಥಳದಲ್ಲೇ ಮೃತಪಟ್ಟಿದ್ದು, ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಬಳಿಕ ರಸ್ತೆ ಪಕ್ಕದಲ್ಲಿರುವ ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮನೆಯಲ್ಲಿ ಮಲಗಿದ್ದ ಸರ್ವಮಂಗಳ ಹಾಗೂ ನಾಗರತ್ನ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಬಸ್​ನಲ್ಲಿದ್ದ ಮಹದೇವಮ್ಮ, ಶೃತಿ ಎಂಬುವರಿಗೂ ಗಂಭೀರ ಗಾಯಗಳಾಗಿದ್ದು, ಮಳವಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ,ಪಟ್ಟಣದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.