ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದಿಲ್ಲ: ಸುಪ್ರೀಂಕೋರ್ಟ್ ತೀರ್ಪು…

509
firstsuddi

ನವದೆಹಲಿ:ನಮಾಜ್ ಮಾಡಲು ಮಸೀದಿಯೇ ಆಗಬೇಕೆಂದೇನಿಲ್ಲ ಎಂದು 1994ರ ತೀರ್ಪನ್ನೇ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ದೀಪಿಕ್ ಮಿಶ್ರ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್, ನ್ಯಾಯಮೂರ್ತಿ. ನಜೀರ್ ಅವರಿದ್ದ ತ್ರಿಸದಸ್ಯ ಪೀಠದ ಪೈಕಿ ಮುಖ್ಯ ನ್ಯಾಯಮೂರ್ತಿ. ದೀಪಕ್ ಮಿಶ್ರಾ ,ಹಾಗೂ ನ್ಯಾಯಮೂರ್ತಿ. ಅಶೋಕ್ ಭೂಷಣ್ ಮಸೀದಿಯು ಇಸ್ಲಾಮ್ ನ ಅವಿಭಾಜ್ಯ ಅಂಗವಾಗಿಲ್ಲ. ಜೊತೆಗೆ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, 1994 ರ ಫಾರೂಕಿ ಪ್ರಕರಣದ ತೀರ್ಪನ್ನೇ ಎತ್ತಿ ಹಿಡಿದೆ. ಆದರೆ ಇಬ್ಬರು ನ್ಯಾಯಮೂರ್ತಿಗಳ ತೀರ್ಪಿಗೆ ಪೀಠದ ಇನ್ನೊಬ್ಬ ನ್ಯಾಯಮೂರ್ತಿ ನಜೀರ್ ಸಹಮತ ವ್ಯಕ್ತಪಡಿಸಲಿಲ್ಲ. ಅಲ್ಲದೆ ನಮಾಜ್ ಗೆ ಮಸೀದಿ ಅವಶ್ಯಕತೆ ಇಲ್ಲ ಎನ್ನುವುದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಎಂದು ಅವರು ತಿಳಿಸಿದ್ದಾರೆ .