ನವದೆಹಲಿ: ಶಬರಿಮಲೆಯ ಅಯ್ಯಪ್ಪನ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂ ಕೋರ್ಟ್ ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿದೆ. ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಕಳೆದ 800 ವರ್ಷಗಳಿಂದ ದೇಗುಲದೊಳಗೆ 10 ರಿಂದ 50 ವರ್ಷದ ಮಹಿಳೆಯರಿಗೆ ಪ್ರವೇಶ ನಿರಾಕರಣೆಯಿದೆ ಇದ್ದು,ಇದಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿತ್ತು.ಇಂದು ಸುಪ್ರೀಂಕೋರ್ಟ್ ನ ಸಿಜೆ ದೀಪಕ್ ಮಿಶ್ರಾ ಸೇರಿದಂತೆ ಪಂಚ ಪೀಠ ನ್ಯಾಯಾಧೀಶರು ತೀರ್ಪನ್ನು ನೀಡಿದ್ದು, ದೀಪಕ್ ಮಿಶ್ರಾ ಅವರು ತಮ್ಮ ತೀರ್ಪಿನಲ್ಲಿ ಮಹಿಳೆಯರೂ ಯಾವಾಗಲೂ ತಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಭಾರತದಲ್ಲಿ ಮಹಿಳೆಯರಿಗೆ ದೇವತೆಯ ಸ್ಥಾನ ನೀಡಲಾಗಿದೆ. ಮಹಿಳೆಯರನ್ನು ದುರ್ಬಲರನ್ನಾಗಿ ನೋಡಬಾರದು, ಮಹಿಳೆಯರ ಕುರಿತು ಸಮಾಜದ ಗ್ರಹಿಕೆ ಬದಲಾಗಬೇಕು ಎಂದು ತಿಳಿಸಿದ್ದಾರೆ.










