ಬೆಂಗಳೂರು: ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದುನಿಯಾ ವಿಜಯ್ ಮತ್ತು ತಂಡದ ಜಾಮೀನು ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಜಾಮೀನು ನೀಡುವಂತೆ ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದ್ದು, ದುನಿಯಾ ವಿಜಯ್ ಗೆ ಇಂದು ಜಾಮೀನು ಸಿಗುತ್ತಾ ಎಂದು ಕಾದು ನೋಡಬೇಕಿದೆ.










