ದುನಿಯಾ ವಿಜಯ್ ಗೆ ಷರತ್ತು ಬದ್ಧ ಜಾಮೀನು ಮಂಜೂರು…

279
firstsuddi

ಬೆಂಗಳೂರು: ದುನಿಯಾ ವಿಜಯ್ ಮತ್ತು ಸ್ನೇಹಿತರು ಸೆಷನ್ಸ್ ಕೋರ್ಟ್ ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಜಿಮ್ ಟ್ರೈನರ್ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ನಟ ದುನಿಯಾ ವಿಜಯ್ ಜಾಮೀನು ಅರ್ಜಿ ವಿಚಾರಣೆಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ ಜಾಮೀನು ನೀಡುವಂತೆ ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದ್ದು,  1ಲಕ್ಷ ರೂ ಬಾಂಡ್​ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದು, ನೀವು ಸಮಾಜಕ್ಕೆ ರೋಲ್ ಮಾಡಲ್ ಆಗಬೇಕು. ಇಂಥ ಸಣ್ಣಪುಟ್ಟ ವಿಚಾರಗಳಿಗೆ ಕೋರ್ಟ್ ಮೆಟ್ಟಿಲೇರಬಾರದು. ಇನ್ನು ಮುಂದೆ ಈ ರೀತಿ ವರ್ತಿಸಬೇಡಿ ಎಂದು ನ್ಯಾಯಾಧೀಶ ರಾಮಲಿಂಗೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ.