ರಾಷ್ಟ್ರಪತಿ ಪ್ರಧಾನಿಯಿಂದ ರಾಷ್ಟ್ರಪಿತನಿಗೆ ಗೌರವ ನಮನ…

593
firstsuddi

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯ ರಾಜ್ ಘಾಟ್ ಗೆ ಭೇಟಿ ನೀಡಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ದೇಶದ ಜನತೆಗೆ ಟ್ವಿಟರ್ ನಲ್ಲಿ ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದಾರೆ.