ಮೈಸೂರು:ಕಾರು ಅಪಘಾತವಾದ ಬಳಿಕ ಆರು ದಿನಗಳ ಕಾಲ ಚಿಕಿತ್ಸೆ ಪಡೆದಿದ್ದ ನಟ ದರ್ಶನ್ ಅವರು ಕಳೆದ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.ವೈದ್ಯರು ಒಂದು ತಿಂಗಳು ವಿಶ್ರಾಂತಿಯನ್ನು ಹೇಳಿದ್ದು, ದರ್ಶನ್ ಈ ನಡುವೆ ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ತಾಯಿಯ ದರ್ಶನ ಪಡೆದು ಬಳಿಕ ಚಾಮುಂಡೇಶ್ವರಿ ದೇವಸ್ಥಾನದ ಪ್ರದಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಅವರ ನಿವಾಸಕ್ಕೆ ತೆರಳಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.










