ಪಕ್ಷಕ್ಕೆ ಮುಜುಗರವನ್ನು ತರುವ ರೀತಿಯಲ್ಲಿ ನಡೆದುಕೊಳ್ಳಬೇಡಿ: ಮುಖ್ಯಮಂತ್ರಿ ಕುಮಾರಸ್ವಾಮಿ…

907
firstsuddi

ರಾಮನಗರ:ಇಂದು ಹೆಚ್.ಡಿ ಕುಮಾರಸ್ವಾಮಿ ಅವರು ಕೇತುಗಾನಹಳ್ಳಿ ಗ್ರಾಮದ ಅವರ ತೋಟದ ಮನೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು,ಸಭೆಯಲ್ಲಿ ಮಾತನಾಡಿದ ಅವರು ಪಕ್ಷದಲ್ಲಿ ಏನೇ ಸಮಸ್ಯೆ ಇದ್ದರು ನನ್ನ ಬಳಿ ಚರ್ಚೆ ಮಾಡಿ. ನನ್ನಿಂದ ಏನೇ ತಪ್ಪಾಗಿದ್ದರು ನಾನು ಅದನ್ನು ತಿದ್ದಿಕೊಳ್ಳುತ್ತೇನೆ. ಸಣ್ಣ ವಿಚಾರಕ್ಕೆಲ್ಲಾ ಗಲಾಟೆಗೆ ಅವಕಾಶ ಕೊಡಬೇಡಿ. ಪಕ್ಷಕ್ಕೆ ಮುಜುಗರ ತರುವ ರೀತಿಯಲ್ಲಿ ನಡೆದುಕೊಳ್ಳಬೇಡಿ.ದೇವೇಗೌಡರ ಜೆಡಿಎಸ್ ಪಕ್ಷ ನಿಮ್ಮಿಂದ ಉಳಿಯಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.