ನವದೆಹಲಿ: ಗೋಕರ್ಣ ದೇವಸ್ಥಾನವನ್ನು ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ ನೀಡುವಂತೆ ಸುಪ್ರೀಂಕೋರ್ಟ್ ಇಂದು ಮಧ್ಯಂತರ ಆದೇಶ ನೀಡಿದ್ದು,ಗೋಕರ್ಣ ಮಠವನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಬೇಕೆಂಬ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶ್ರೀರಾಮಚಂದ್ರಾಪುರ ಮಠ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಕುರಿಯನ್ ಜೊಸೇಫ್, ನ್ಯಾ. ಖಾನಿಲ್ವಕರ್ ನೇತೃತ್ವದ ದ್ವಿಸದಸ್ಯ ಪೀಠದಿಂದ ಈ ಆದೇಶ ಹೊರಡಿಸಲಾಗಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ.










