ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಮ್ಮ ಸರ್ಕಾರಿ ನಿವಾಸ ದಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಸಚಿವರಿಗೆ ಉಪಾಹಾರ ಕೂಟ ಆಯೋಜನೆ ಮಾಡಿದ್ದು. ಉಪಹಾರ ಕೂಟದಲ್ಲಿ ಡಿಸಿಎಂ ಪರಮೇಶ್ವರ್ ಸೇರಿದಂತೆ ಹಿರಿಯ ಸಚಿವ ಆರ್.ವಿ ದೇಶ್ ಪಾಂಡೆ ,ಸಚಿವೆ ಜಯಮಾಲಾ, ಪಕ್ಷೇತರ ಶಾಸಕ, ಸಚಿವ ಆರ್.ಶಂಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.










