ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ
ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿ ಒಂದು ತಿಂಗಳಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದರ 2 ರೂಪಾಯಿಯಷ್ಟು ಇಳಿಕೆ ಮಾಡಿದ್ದೇವೆ, ಮತ್ತೆ ಇಂಧನ ಮೇಲಿನ ಬೆಲೆಯನ್ನು ಇಳಿಕೆ ಮಾಡುವುದಿಲ್ಲ. ಕೇಂದ್ರ ಸರ್ಕಾರಕ್ಕೆ ಈಗಲಾದರೂ ಜನರ ಕಷ್ಟ ಅರ್ಥವಾಯಿತಲ್ಲ ಎಂದಿದ್ದಾರೆ.










