ಉಪ ಮೇಯರ್ ರಮೀಳಾ ಉಮಾಶಂಕರ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಹೆಚ್.ಡಿ ದೇವೇಗೌಡ…

399
firstsuddi

ಬೆಂಗಳೂರು:ಉಪ ಮಹಾಪೌರರಾದ ಶ್ರೀಮತಿ ರಮೀಳಾ ಉಮಾಶಂಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅತೀ ಚಿಕ್ಕ ವಯಸ್ಸಿನಲ್ಲೇ ಸಮಾಜದ ಬಗ್ಗೆ ಉತ್ತಮ ಕಾಳಜಿ ಹೊಂದಿದ್ದ ಕ್ರಿಯಾಶೀಲ ಮಹಿಳೆ ಅವರು.ಅವರ ನಿಧನದಿಂದ ನಮ್ಮ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.