ತಮಿಳುನಾಡು, ಕೇರಳದಲ್ಲಿ ರೆಡ್ ಅಲರ್ಟ್ ಘೋಷಣೆ …

481
firstsuddi

ಚೆನ್ನೈ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ತಮಿಳುನಾಡಿನ ಚೆನ್ನೈ, ಕಾಂಚಿಪುರಂ ಮತ್ತು ತಿರುವಳ್ಳುವರ್ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಕೇರಳ, ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಅಕ್ಟೋಬರ್  7ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಅಕ್ಟೋಬರ್ 10ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.