ಕಸ ಹಾಕಲು ಬಂದ ಮಹಿಳೆಯ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ…

355
firstsuddi

ತುಮಕೂರು: ಇಂದು ಬೆಳಗ್ಗೆ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಕಸ ಹಾಕಲು ಬಂದ ಮಹಿಳೆಯೊಬ್ಬರ 60 ಗ್ರಾಂ ತೂಕದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ. ಪದ್ಮ ಎಂಬುವರು ಇಂದು ಬೆಳಗ್ಗೆ ಮನೆಯ ಮುಂದೆ ಬಂದ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಕಸ ಹಾಕಲು ಬಂದಿದ್ದು , ಈ ವೇಳೆ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ಕಳ್ಳರು ಸುಮಾರು 1.5 ಲಕ್ಷ ರೂ. ಬೆಲೆ ಬಾಳುವ 60 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.