ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಎಫ್ಐಆರ್…

211
firstsuddi

ಬೆಂಗಳೂರು: ಅನಧಿಕೃತ ಜಾಹೀರಾತು ಫಲಕಗಳನ್ನು ಹೈಕೋರ್ಟ್ ನಿಷೇಧಿಸಿದ್ದರೂ ಸಚಿವ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಜಮೀನುಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬಿಬಿಎಂಪಿ ಯ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್ ನೀಡಿದ ದೂರಿನ ಅನ್ವಯ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮೈಸೂರು ರಸ್ತೆಯ ಪಂತರಪಾಳ್ಯದಲ್ಲಿದ್ದ ಶಿವಕುಮಾರ್ ಅವರ ಮಾಲೀಕತ್ವದ ಜಮೀನಿನಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿ ಮುತ್ತುರಾಜ್ ನೋಟಿಸ್ ನೀಡಿದ್ದರು. ಆದರೆ ಡಿಕೆ ಶಿವಕುಮಾರ್ ಜಾಹೀರಾತುಗಳನ್ನೂ ತೆರವುಗೊಳಿಸಿಲ್ಲದ  ಹಿನ್ನೆಲೆಯಲ್ಲಿ ಅಧಿಕಾರಿ ಮುತ್ತುರಾಜ್ ಅವರು ಶಿವಕುಮಾರ್ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.