ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ-13 ಮಂದಿ ಸಾವು-30ಕ್ಕೂ ಹೆಚ್ಚು ಮಂದಿ ಗಂಭೀರ…

206
firstsuddi

ಫಿರೋಜಾಬಾದ್ : ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 13 ಮಂದಿ ಮೃತಪಟ್ಟಿರುವ ಘಟನೆ ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ 40-50 ಮಂದಿ ಪ್ರಯಾಣಿಕರಿದ್ದ ಬಸ್ ದೆಹಲಿಯಿಂದ ಬಿಹಾರದ ಕಡೆಗೆ ತೆರಳುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.