ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ತಾಲ್ಲೂಕಿನ ಚಾರ್ಮಾಡಿ ಘಾಟ್‍ನಲ್ಲಿ ನಡೆದಿದ್ದು, ತಡೆಗೋಡೆ ಇಲ್ಲದಿದ್ದರೆ 300 ಅಡಿ ಪ್ರಪಾತಕ್ಕೆ ಬೀಳುತ್ತಿದ್ದ ಕಾರಿನಲ್ಲಿದ್ದ ಕೇರಳ ಮೂಲದ ಎಲ್ಲರೂ ಅದೃಷ್ಟಾವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ. ಮಾಹಿತಿ ತಿಳಿದ ಬಣಕಲ್ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.