ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ-ಮೂವರು ಸಾವು…

151
firstsuddi

ವಿಜಯಪುರ : ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ದಿಂಡವಾರ ಬಳಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದ ಬೈಕ್ ಸವಾರರು ಕೊಪ್ಪಳದ ಅಚಿಜನಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಓರ್ವ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆ ನಡೆದ ಬಳಿಕ ಎರಡೂ ಬೈಕ್‍ಗಳು ಹೊತ್ತಿ ಉರಿದಿದೆ. ಅಲ್ಲದೇ ಮೃತರೆಲ್ಲರಿಗೂ ತಲೆಗೆ ಮಾತ್ರ ಗಾಯಗಳಾಗಿದ್ದು, ಇದರಿಂದ ಹಲವಾರು ಅನುಮಾನಗಳು ಹುಟ್ಟಿಕೊಂಡಿದ್ದು, ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.