ಗದಗ : ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಾರಾಯಣಪುರ ಗ್ರಾಮದ ಬಳಿ ನಡೆದಿದೆ. ಮೋಹನ್ ರೋಣ ತಾಲ್ಲೂಕಿನ ಮೆಣಸಗಿ ನಿವಾಸಿ ಮೋಹನ್(40) ಹಾಗೂ ಮೈಸೂರು ಮೂಲದ ಮಂಜುನಾಥ(55) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಗದಗದಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಲಾರಿ ಹಾಗೂ ಶಿವಮೊಗ್ಗ ಕಡೆಗೆ ಹೊರಟಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರೂ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದು. ಡಿಕ್ಕಿಯಾದ ರಭಸಕ್ಕೆ ಲಾರಿಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










