ಬಿಗ್ ಬಾಸ್ ಖ್ಯಾತಿಯ ನಿವೇದಿತಗೌಡ ಮೇಲೆ ದೂರು ದಾಖಲು.

893
firstsuddi

ಬೆಂಗಳೂರು- ಬಿಗ್ ಬಾಸ್ ಖ್ಯಾತಿಯ ನಿವೇದಿತಗೌಡ ಅಪಾಯಕಾರಿ ‘ಕೀಕಿ’ ಡ್ಯಾನ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು,ಈ ಬಗ್ಗೆ ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಅವರು ನಿವೇದಿತಗೌಡ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೀ ಕೀ ಡ್ಯಾನ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿರುವುದರಿಂದ ಯುವಜನತೆಯನ್ನು ಪ್ರಚೋದಿಸುವ ಕೆಲಸ ಮಾಡಿದ್ದಾರೆ. ಇವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರನ್ನು ನೀಡಿದ್ದಾರೆ.