ನೃತ್ಯ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬಾಲಕಿ…

275
firstsuddi

ಮುಂಬೈ: ಸ್ಪರ್ಧೆಯೊಂದರಲ್ಲಿ ನೃತ್ಯ ಮಾಡುತ್ತಿದ್ದ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಮುಂಬೈನ ಕಂಡಿವಾಲಿಯಲ್ಲಿ
ನಡೆದಿದೆ. ಅನಿಷಾ ಶರ್ಮಾ 12 ವರ್ಷದ ಮೃತ ಬಾಲಕಿ .ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅನಿಷಾ ಶರ್ಮಾ ನೃತ್ಯ ಮಾಡಲು ಪ್ರಾರಂಭಿಸಿದ ಕೆಲವೇ ಸಮಯದಲ್ಲಿ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರವೇ ಬಾಲಕಿ ಯ ಮರಣಕ್ಕೆ ಕಾರಣ ಏನೆಂಬುದು ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ .