ಚಿಕ್ಕಮಗಳೂರು : ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರ ಭಾವಚಿತ್ರದ ಮುಂದೆ ನಿಂತು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಕಿಡಿಗೇಡಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ತಾಲೂಕಿನ ಕೈಮರ ಚೆಕ್ಪೋಸ್ಟ್ ಬಳಿ ನಡೆದಿದೆ. ಯೂನಸ್ ಎಂಬಾತ ಚಿತ್ರದುರ್ಗದಿಂದ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದು, ಕಾಫಿ ಕುಡಿಯಲೆಂದು ಕೈಮರ ಚೆಕ್ಪೋಸ್ಟ್ ಬಳಿ ಬಸ್ ನಿಲ್ಲಿಸಿದ್ದ ಸಂದರ್ಭದಲ್ಲಿ ಯೂನಸ್ ಪುಲ್ವಾಮ ಹುತಾತ್ಮ ಯೋಧರ ಭಾವಚಿತ್ರದ ಮುಂದೆ ನಿಂತು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ದೇಶ ದ್ರೋಹದ ಘೋಷಣೆ ಕೂಗುತ್ತೀಯ ಎಂದು ಸ್ಥಳೀಯರು ಪ್ರಶ್ನಿಸಿದ್ದಕ್ಕೆ ಯೂನಸ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿದ್ದು, ಸ್ಥಳೀಯರು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು :ಪಾಕಿಸ್ತಾನ ಜಿಂದಾಬಾಂದ್ ಎಂದು ಕೂಗಿದ ಕಿಡಿಗೇಡಿಗೆ ಸ್ಥಳೀಯರಿಂದ ಹಿಗ್ಗಾಮುಗ್ಗಾ ಥಳಿತ…










