ಹುಬ್ಬಳ್ಳಿ: ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ದೈಹಿಕ ಶಿಕ್ಷಣ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಳಿವಾಡ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 10 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕನಾಗಿದ್ದ ಚನ್ನಪ್ಪನನ್ನು ವರ್ಗಾವಣೆ ಮಾಡಿದ್ದಕ್ಕೆ ಬೇಸತ್ತು ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು,ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.