ರಾಂಚಿ : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ರಾಂಚಿಯಲ್ಲಿ ನಡೆದಿದೆ. ನಿನ್ನೆ ತನ್ನ ಸಹಪಾಠಿಗಳೊಂದಿಗೆ ಆಟವಾಡಲು ತೆರಳಿದ್ದ ಬಾಲಕಿ ಸಂಜೆಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯಿಂದ ಸುಮಾರು 50 ಮೀ ದೂರದಲ್ಲಿ ಗೋಣಿ ಚೀಲವೊಂದು ಇರುವುದನ್ನು ಬಾಲಕಿಯ ಅಜ್ಜ ಗಮನಿಸಿದ್ದಾರೆ. ಬಳಿಕ ಆ ಗೋಣಿ ಚೀಲವನ್ನು ತೆರೆದು ನೋಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಇದನ್ನು ಕಂಡ ಪೋಷಕರು ಆತಂಕಗೊಂಡಿದ್ದಾರೆ.
ಬಾಲಕಿಯನ್ನು ತನ್ನ ಸಂಬಂಧಿಕನೇ ಆಗಿರುವ 28 ವರ್ಷದ ಯುವಕ ಕರೆದುಕೊಂಡು ಹೋಗುತ್ತಿರುವುದನ್ನು ಸಂಬಂಧಿಕರು ಗಮನಿಸಿದ್ದಾರೆ. ಅವನಿಂದಲೇ ಈ ಕೃತ್ಯ ನಡೆದಿರಬಹುದು ಎಂದು ಸ್ಥಳೀಯರು ಹಾಗೂ ಕುಟುಂಬಸ್ಥರು ಅವನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.










