ಹಾಸನದ ಶಾಂತಿಗ್ರಾಮ ಬಳಿ ಭೀಕರ ಅಪಘಾತ : ಐರಾವತ ನಿಯಂತ್ರಣ ತಪ್ಪಿ8 ಮಂದಿ ದುರ್ಮರಣ

481

ಹಾಸನ : ಹಾಸನದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಇಲ್ಲಿನ ಶಾಂತಿಗ್ರಾಮದ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಐರಾವತ ಬಸ್ ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದೆ. ಈ ವೇಳೆ 8 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. 10 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಐರಾವತ ಬಸ್’ನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.