ಚಿಕ್ಕಮಗಳೂರು : ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ಶೃಂಗೇರಿ ಶಾರದಾಂಬೆ ದರ್ಶನ ಪಡೆದಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆ ನಾಮಪತ್ರವನ್ನು ಶಾರದಾಂಬೆ ಪಾದದಡಿ ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದು, ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಸ್ವಾಮೀಜಿ ಆರ್ಶೀವಾದವನ್ನು ಪ್ರಜ್ವಲ್ ರೇವಣ್ಣ ಅವರು ಪಡೆದಿದ್ದಾರೆ. ಬಳಿಕ ಶೃಂಗೇರಿಯಿಂದ ಧರ್ಮಸ್ಥಳಕ್ಕೆ ಅವರು ತೆರಳಿದ್ದು, ಧರ್ಮಸ್ಥಳದಲ್ಲಿ ಮಂಜುನಾಥಸ್ವಾಮಿ ದರ್ಶನ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.










