ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ…

1114
firstsuddi

ಮಂಗಳೂರು: ಮೂಡಬಿದಿರೆಯ ಪ್ರಸಿದ್ಧ ಆಳ್ವಾಸ್ ಕಾಲೇಜಿನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಆನೆಕಲ್ ನಿವಾಸಿ ವಿನುತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ವಿನುತಾ ಇಂದು ಬೆಳಗ್ಗೆ ಕಾಲೇಜಿಗೆ ಹೋಗದೆ ಹಾಸ್ಟೆಲಿನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ತಿಳಿದು ಮೂಡಬಿದಿರೆ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.