ಬೆಳಗಾವಿ – ರಾಷ್ಟ್ರೀಯ ವೈದ್ಯಕೀಯ ಆಯೋಗ ತಿದ್ದುಪಡಿ ವಿಧೇಯಕವನ್ನು ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯ ಗೋಕಾಕ್ ನ ಹಸುಗೂಸು ಸರಿಯಾದ ಚಿಕಿತ್ಸೆ ಸಿಗದೆ ಮೃತಪಟ್ಟಿದೆ. ಗೋಕಾಕ್ ನಗರ ನಿವಾಸಿಯಾದ ಬಸಪ್ಪ ಎಂಬುವರ ಮಗು ನಿನ್ನೆಯಷ್ಟೇ ಆಸ್ಪತ್ರೆಯಲ್ಲಿ ಜನಿಸಿದ್ದ ಮಗು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು , ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು. ಮುಷ್ಕರದ ಹಿನ್ನೆಲೆಯಲ್ಲಿ ವೈದ್ಯರು ಇಲ್ಲದೇ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.