ಮಂಡ್ಯ: ನಾಲ್ಕು ದಿನಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ರಸ್ತೆ ಅಪಘಾತದಲ್ಲಿ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲಿಯೂರು ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಸಹನ (19) ಮೃತ ದುರ್ದೈವಿ. ದರ್ಶನ್(24) ಗಂಭೀರವಾಗಿ ಗಾಯಗೊಂಡಿರುವ ಪತಿ. ಇಬ್ಬರು ರಾಮನಗರ ಮೂಲದವರು ಎನ್ನಲಾಗಿದ್ದು, ಎರಡು ತಿಂಗಳ ಹಿಂದೆ ಇಬ್ಬರೂ ನಾಪತ್ತೆಯಾಗಿದ್ದು, ನಾಲ್ಕು ದಿನಗಳ ಹಿಂದೆ ಮದುವೆಯಾಗಿದ್ದರು ಎನ್ನಲಾಗಿದ್ದು, ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದಾಗ ಯಲಿಯೂರು ಸಮೀಪ ಓವರ್ ಟೇಕ್ ಮಾಡುವ ವೇಳೆ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಈ ಸಂದರ್ಭದಲ್ಲಿ ಕೆಳಗೆ ಬಿದ್ದವರ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಹನ ಮೃತಪಪಟ್ಟಿದ್ದು, ದರ್ಶನ್ ಗಂಭೀರವಾಗಿ ಗಾಯಗೊಂಡಿದ್ದು, ದರ್ಶನ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.










