ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಸುಟ್ಟು ಕರಕಲಾದ ಬೈಕ್ ಸವಾರ…

325

ಕೋಲಾರ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ  ಸುಟ್ಟು ಕರಕಲಾದ  ಘಟನೆ ಜಿಲ್ಲೆಯ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆಯ ವಿವೇಕಾನಂದ ನಗರದ ನೀರಜ್(20) ಸ್ಥಳದಲ್ಲೇ ಸುಟ್ಟು ಕರಕಲಾದ ಬೈಕ್ ಸವಾರ. ನೀರಜ್ ಹಾಗೂ ಆತನ ಸ್ನೇಹಿತ ಇಬ್ಬರು ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ  ಎದುರಿನಿಂದ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಬೈಕ್ ಹೊತ್ತಿ ಉರಿದಿದ್ದು, ಬೈಕ್ ನಲ್ಲಿದ್ದ ನೀರಜ್ ಸುಟ್ಟು ಮೃತಪಟ್ಟಿದ್ದು, ಆತನ ಸ್ನೇಹಿತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.