ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ವೈಜಕೂರು ಬಳಿ ಕ್ಯಾಂಟರ್ ಮತ್ತು ಸ್ಕಾರ್ಪಿಯೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿಟ್ಟಿದ್ದು, ಸ್ಕಾರ್ಪಿಯೋದಲ್ಲಿದ್ದ ನವಶಾದ್ (28) ಮತ್ತು ಮನ್ಸೂರು (30) ಮೃತರನ್ನು ಆಂಧ್ರಪ್ರದೇಶದ ರಾಯಚೂಟಿ ಗ್ರಾಮದವರು ಎನ್ನಲಾಗಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.