ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ-7 ಮಂದಿ ಸಜೀವ ದಹನ…

158
firstsuddi

ಗುಜರಾತ್ : ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ 7 ಮಂದಿ ಸಜೀವ ದಹನವಾಗಿರುವ ಘಟನೆ ಸುರೇಂದ್ರನಗರ್ ಜಿಲ್ಲೆಯ ಪಡ್ಡಿ ಎಂಬಲ್ಲಿ ನಡೆದಿದೆ. ಮೃತರು ಕಾರಿನಲ್ಲಿ ನಿನ್ನೆ ತಡರಾತ್ರಿ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಸ ತುಂಬಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಕಾರಿನಲ್ಲಿದ್ದ 7 ಮಂದಿಯೂ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.