ಲಾರಿ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ-ತಾಯಿ, ಮಗು ಸ್ಥಳದಲ್ಲೇ ಸಾವು…

210
firstsuddi

ರಾಯಚೂರು : ಲಾರಿ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರಿನ ಎಲ್‍ಬಿಎಸ್ ನಗರದ ಬಳಿ ನಡೆದಿದೆ. ಈಶ್ವರಮ್ಮ(35), ವನಿತಾ(3) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಮೃತ ಈಶ್ವರಮ್ಮ ಅವರು ಮಗಳಿಗೆ ಆರೋಗ್ಯ ಸಮಸ್ಯೆ ಇದ್ದುದರಿಂದ ತನ್ನ ಅಣ್ಣನ ಮಗನೊಂದಿಗೆ ಸ್ಕೂಟಿಯಲ್ಲಿ ಚಿಕಿತ್ಸೆಯನ್ನು ಕೊಡಿಸಿ ತಮ್ಮ ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬರುತಿದ್ದ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತಾಯಿ ಮಗಳು ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸೂರ್ಯ ಪ್ರಕಾಶ್ ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಘಟನೆ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ಕುರಿತು ರಾಯಚೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.