ಲಾರಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ,ಆರು ಮಂದಿ ದುರ್ಮರಣ…   

223
firstsuddi

ಧಾರವಾಡ: ಲಾರಿ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಕೋಳಿವಾಡ ಕ್ರಾಸ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರು ಮುಂಬೈ ಮೂಲದವರು ಎನ್ನಲಾಗಿದ್ದು,ಮುಂಬೈನಿಂದ ಖಾಸಗಿ ಬಸ್ ​ನಲ್ಲಿ ಒಂದು ವಾರದ ಹಿಂದೆಯೇ ಕರ್ನಾಟಕದ ಪ್ರವಾಸಕ್ಕೆಂದು ಬಂದಿದ್ದರು. ಇಂದು ಮುಂಜಾನೆ ಹಂಪಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಶ್ವನಾಥ್‌(75) ದಿನಕರ್‌ ರಮೇಶ್‌ ಜಯಪಾಲ್‌ (70), ಸುಮೇಧಾ(65) ಲಾಹು(65) ಸುಚಿತ್ರಾ (65), ದಿನಕರ್‌(74) ಅಪಘಾತದಲ್ಲಿ ಮೃತಪಟ್ಟಿದ್ದಾರೆ.  ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.