ಬೆಂಗಳೂರು: ಐರಾವತ ಬಸ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಸಮೀಪದ ಯಂಟಗಾನಹಳ್ಳಿ ಬಳಿ ನಡೆದಿದೆ. ತಂದೆ ಏಳುಮಲೈ (43), ತಾಯಿ ಕಮಲ (35), ಮಕ್ಕಳಾದ ಕಿರಣ್ (14), ಗಿರಿಧರ್( 13), ಗೀತಾ (10) ಮೃತ ದುರ್ದೈವಿಗಳು. ವೇಗವಾಗಿ ಚಲಿಸುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಐರಾವತ ಬಸ್ಗೆ ಡಿಕ್ಕಿ ಹೊಡೆದಿದ್ದು, ಬಸ್ ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










