ಕಡೂರು:ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಚಾಲಕನ ದುರ್ಮರಣ …

215
firstsuddi

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬಾಣೂರು ಬಳಿ ನಡೆದಿದೆ. ಲಾರಿ ಚಾಲಕ ಹೊಸದುರ್ಗ ಮೂಲದವರು ಎನ್ನಲಾಗಿದ್ದು, ಗೊಬ್ಬರ ತುಂಬಿಕೊಂಡು ಚಿಕ್ಕಮಗಳೂರಿನಿಂದ ಅರಸೀಕೆರೆ ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.