ಬಳ್ಳಾರಿ: ಎರಡು ಬಸ್ಗಳ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 18 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೂಡ್ಲಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಕೂಡ್ಲಿಗಿ ರಾಷ್ಟ್ರೀಯ ಹೆದ್ದಾರಿಯ ಮೊರಬ ಕ್ರಾಸ್ ಬಳಿ ಎಸ್ಆರ್ಎಸ್ ಸ್ಲೀಪರ್ ಕೋಚ್ ಬಸ್ ಮತ್ತು ಎನ್ಇಕೆಎಸ್ಆರ್ಟಿಸಿಯ ಕರೋನ ಸ್ಲೀಪರ್ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕರೋನ ಸ್ಲೀಪರ್ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿರುವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೂಡ್ಲಿಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










