ಶಾಸಕ ಸಿ.ಟಿ. ರವಿ ಅವರ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ…

455

ತುಮಕೂರು: ರಸ್ತೆ ಬದಿ ನಿಂತಿದ್ದ ಎರಡು ಕಾರಿಗೆ ಬಿಜೆಪಿ ಶಾಸಕ ಸಿ.ಟಿ ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ಜಿಲ್ಲೆಯ ಕುಣಿಗಲ್ ತಾಲೂಕಿನ ಊರ್ಕೇನಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ನಡೆದಿದೆ. ಮೃತರನ್ನು ಶಶಿಕುಮಾರ್ ಹಾಗೂ ಸುನಿಲ್ ಗೌಡ ಎಂದು ಗುರುತಿಸಲಾಗಿದೆ. ಎರಡು ಕಾರುಗಳಲ್ಲಿ 13 ಜನ ಗೆಳೆಯರು ಪ್ರವಾಸಕ್ಕೆಂದು ತೆರಳಿದ್ದರು. ಪ್ರವಾಸ ಮುಗಿಸಿ ಊರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮೂತ್ರ ವಿಸರ್ಜನೆಗಾಗಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರುಗಳನ್ನು ನಿಲ್ಲಿಸಿ ಕೆಳಗಿಳಿದ್ದರು. ಇದೇ ಮಾರ್ಗದಲ್ಲಿ ಬಂದ ಸಿ.ಟಿ.ರವಿ ಅವರಿದ್ದ ಫಾರ್ಚುನರ್‌ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಪಘಾತದಲ್ಲಿ ಶಾಸಕ ಸಿ.ಟಿ.ರವಿ ಅವರು ಗಾಯಗೊಂಡಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.